ಮಳೆಗಾಲದ ಪ್ರಕೃತಿಯ ಸೊಬಗನ್ನು ಸಂಪೂರ್ಣವಾಗಿ ಚಿತ್ರಿಸಿರುವ ಈ ಭಾವಗೀತೆಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಕಣವಿಯವರ ಸುಂದರ ಸಾಲುಗಳು, ಅಶ್ವಥ್ರವರ ಸುಮಧುರ ಸಂಗೀತ ಸಂಯೋಜನೆ ಹಾಗೂ ಛಾಯಾರವರ ಇಂಪಾದ ಗಾಯನ ಈ ಗೀತೆಯಲ್ಲಿ ಮೇಳೈಸಿವೆ.
ಓದಿ, ನೋಡಿ, ಕೇಳಿ ಆನಂದಿಸಿ.
ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ
ಸೋ! ಎಂದು ಶೃತಿ ಹಿಡಿದು ಸುರಿಯುತಿತ್ತು
ಅದಕೇ ಹಿಮ್ಮೇಳವನೆ ಸೂಸಿಪಹ ಸುಳಿಗಾಳಿ
ತೆಂಗು ಗರಿಗಳ ನಡುವೆ ನುಸುಳುತಿತ್ತು
ಇಳೆವೆಣ್ಣು ಮೈದೊಳೆದು ಮಕರಂದದರಿಶಣದಿ
ಹೂ ಮುಡಿದು ಮದುಮಗಳ ಹೋಲುತಿತ್ತು
ಮೂಡಣದಿ ನೇಸರನ ನಗೆ ಮೊಗದಾ ಶ್ರೀಕಾಂತಿ
ಬಿಳಿಯಾ ಮೋಡದ ಹಿಂದೆ ಹೊಳೆಯುತಿತ್ತು
ಹುಲ್ಲೆಸಳು ಹೂಪಕಳೆ ಮುತ್ತು ಹನಿಗಳ ಮಿಂಚು
ಸೊಡರಿನಲಿ ಆರತಿಯ ಬೆಳಗುತಿತ್ತು
ಕೊರಲುಕ್ಕಿ ಹಾಡುತಿಹ ಚಿಕ್ಕಪಕ್ಕಿಯ ಬಳಗ
ಶುಭಮಸ್ತು ಶುಭಮಸ್ತು ಎನ್ನುತಿತ್ತು
ತಳಿರ ತೋರಣದಲ್ಲಿ ಬಳ್ಳಿ ಮಾಡಗಳಲ್ಲಿ
ದುಂಬಿಗಳ ಓಂಕಾರ ಹೊಮ್ಮುತಿತ್ತು
ಹಚ್ಚ ಹಸುರಿನ ಪಚ್ಚೆ ನೆಲಗಟ್ಟಿನಂಗಳದಿ
ಚಿಟ್ಟೆ ರಿಂಗಣ ಗುಣಿತ ಹಾಕುತಿತ್ತು
ಉಷೆಯ ನುಙ್ಗದಪಿನಲಿ ಹರ್ಷಬಾಷ್ಪಗಳಂತೆ
ಮರದ ಹನಿ ತಟಪಟನೆ ಉದುರುತಿತ್ತು
ಸೃಷ್ಠಿಲೀಲೆಯೊಳಿಂತು ತಲ್ಲೀನವಾದ ಮನ
ಮುಂಬಾಳ ಸವಿಗನಸ ನೆನೆಯುತಿತ್ತು
-ಮನು
Subscribe to:
Post Comments (Atom)

3 comments:
yappa! yen patience maraaya ninge...achcha kannada dalli type maaDakke!
-baLu
awesome...good work...
ಮನು,
ಕವಿತೆ ಚೆನ್ನಾಗಿದೆ. ಕವಿತೆಯ rendering ಸಹಾ ತುಂಬಾ ಚೆನ್ನಾಗಿದೆ.
Post a Comment